ರಾಜಸ್ಥಾನ: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಕೊಲೆ ಮಾಡಿದ್ದು, ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.
ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು.
ಕೂಡಲೇ ಆರೋಪಿಯನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು, ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ. ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.