Friday, April 4, 2025
Google search engine

Homeಅಪರಾಧಜೈಲಿನಲ್ಲಿ ರಾಜಾತಿಥ್ಯ: ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ಜೈಲಿನಲ್ಲಿ ರಾಜಾತಿಥ್ಯ: ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

RELATED ARTICLES
- Advertisment -
Google search engine

Most Popular