Friday, April 18, 2025
Google search engine

Homeರಾಜಕೀಯರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗವಾಗಿದೆ.

ಕಾಂಗ್ರೆಸ್​ನ ಅಜಯ್ ಮಕೇನ್, ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್​ ಗೆಲುವು ಸಾಧಿಸಿದ್ದಾರೆ. ಇನ್ನು ನಿರೀಕ್ಷೆಯಂತೆ ಬಿಜೆಪಿಯ ನಾರಾಯಣಸಾ ಭಾಂಡಗೆ ಅವರು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್​​ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲು ಅನುಭವಿಸಿದ್ದಾರೆ.

ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಶೇ.99.5ರಷ್ಟು ಮತದಾನವಾಗಿದ್ದು, ಒಟ್ಟು 223 ಮತಗಳ ಪೈಕಿ 222 ಶಾಸಕರು ತಮ್ಮ ಮತದಾನ ಮಾಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್‌ನ 19 ಶಾಸಕರು ಸಹ ಮತದಾನ ಮಾಡಿದ್ದಾರೆ.

ಯಶವಂತಪುರ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಸ್ವಪಕ್ಷದ ಅಭ್ಯರ್ಥಿ ಬದಲಿಗೆ ಕಾಂಗ್ರೆಸ್​ ಅಭ್ಯರ್ಥಿಗೆ ಮತ ಹಾಕಿದ್ದರೆ, ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್​ ಮತದಾನಕ್ಕೆ ಗೈರಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ಈ ಇಬ್ಬರು ಶಾಸಕರ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular