ಮೈಸೂರು, ಜು. ೨೯:ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೈಸೂರು ತಾಲ್ಲೂಕು, ಟಿ. ಕಾಟೂರು ಬಳಿ ಇರುವ ಅವರ ತೋಟದಲ್ಲಿ ಅವರ ಪುತ್ರ ದಿ. ರಾಕೇಶ್ ಸಿದ್ದರಾಮಯ್ಯರವರ ೭ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಕೇಶ್ ಸಮಾಧಿಗೆ ಪೂಜೆ ಸಲ್ಲಿಸಿದರು.
ದಿ|| ರಾಕೇಶ್ ೨೦೧೬ರಲ್ಲಿ ಅಕಾಲಿಕ ಮರಣ ಹೊಂದಿದ ನಂತರ ಪ್ರತಿ ವರ್ಷ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಿದ್ದರಾಮಯ್ಯರವರ ಪತ್ನಿ ಪಾರ್ವತಮ್ಮ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ, ರಾಕೇಶ್ ಪತ್ನಿ ಸ್ಮಿತಾ ರಾಕೇಶ್, ಧವನ್ ರಾಕೇಶ್, ತನ್ಮಯಿ ರಾಕೇಶ್ ಹಾಗೂ ಸಿದ್ದರಾಮಯ್ಯರವರ ಸಹೋದರ ಸಿದ್ದೇಗೌಡರವರು ಪೂಜೆ ಸಲ್ಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಕೆ.ಆರ್. ನಗರ ಶಾಸಕ ಡಿ. ರವಿಶಂಕರ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ, ಡಾ. ಶುಶ್ರುತ್, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ಸುಧಾ ಮಹದೇವಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಸಿಂಡಿಕೇಟ್ ಮಾಜಿ ಸದಸ್ಯ ಮಾರ್ಬಳ್ಳಿ ಕುಮಾರ್, ಉದ್ಬೂರು ಕೃಷ್ಣ, ನಾಡನಹಳ್ಳಿ ರವಿ, ಸಿದ್ದರಾಮನಹುಂಡಿ ಬಸವರಾಜು, ಸಿ.ಎಂ. ಸಿದ್ದರಾಮೇಗೌಡ, ಕೆಂಚಪ್ಪ, ಜೆ.ಜೆ. ಆನಂದ್, ಛಾಯಾ, ಕಮಲ, ಗಡ್ಡಬಸಪ್ಪ ಹಾಗೂ ಕುಟುಂಬಸ್ಥರು, ಅಭಿಮಾನಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಗರ ಪೊಲೀಸ್ ಆಯುಕ್ತ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
