Thursday, April 3, 2025
Google search engine

Homeದೇಶರಾಮ ಮಂದಿರ ಉದ್ಘಾಟನೆ ಸಮಾರಂಭ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಗೆ ಆಹ್ವಾನ

ರಾಮ ಮಂದಿರ ಉದ್ಘಾಟನೆ ಸಮಾರಂಭ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅವರಿಗೆ ಆಮಂತ್ರಣಗಳನ್ನು ಕಳುಹಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಖರ್ಗೆ, ಸೋನಿಯಾ ಮತ್ತು ಚೌಧರಿ ಅವರಿಗೆ ಪ್ರತ್ಯೇಕವಾಗಿ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್‌ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ.

ಆಮಂತ್ರಣ ಪತ್ರಗಳನ್ನು ಟ್ರಸ್ಟ್‌ಗೆ ಸಂಬಂಧಿಸಿದವರ ನಿಯೋಗದಿಂದ ತಲುಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ದಿನಗಳಲ್ಲಿ ಇತರೆ ಪ್ರತಿಪಕ್ಷ ನಾಯಕರಿಗೂ ಹೆಚ್ಚಿನ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular