ಮಂಗಳೂರು: ಇಲ್ಲಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ಗುರುವಾರ(ಜ.23) ನಡೆದಿದೆ.
ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪದ ಮೇಲೆ ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಗೆ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನಾ ಸಂಘಟನೆ ದಾಳಿ ನಡೆಸಿದೆ, ಈ ವೇಳೆ ಮಸಾಜ್ ಸೆಂಟರ್ ನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ.