ರಾಮನಗರ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯು ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಕನಕಪುರ ತಾಲೂಕಿನ ಕಲ್ಕೆರೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ದೀಪಕ್ (23) ಮೃತ ವ್ಯಕ್ತಿ.
ಎಣ್ಣೆ ವಿಚಾರಕ್ಕೆ ನಡೆದಿದ್ದ ಗಲಾಟೆ ನಡೆದಿದೆ. ರಾತ್ರಿ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಹಾಕಿ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕನಕಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.