ರಾಮನಗರ: ಬೆಳ್ಳಂಬೆಳಿಗ್ಗೆ ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಸಮೀಪದ ಕುಂಬಾಪುರ ಗೇಟ್ ಬಳಿ ನಡೆದಿದೆ.
ನವ್ಯಶ್ರೀ ಹಾಗೂ ಹರ್ಷ ಮೃತ ಪ್ರೇಮಿಗಳು.
ರೈಲು ಹರಿದು ಇಬ್ಬರ ಮೃತದೇಗ ಛಿದ್ರವಾಗಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತರು ನೆಲಮಂಗಲ ಮೂಲದವರು ಎಂಬ ಮಾಹಿತಿ ಲಭ್ಯವಾಗಿದ್ದು, ಬೆಳಿಗ್ಗೆ 6.30ರ ವೇಳೆಗೆ ಪಲ್ಸರ್ ಬೈಕ್ ನಲ್ಲಿ ಬಂದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಪ್ರೇಮಿಗಳ ಕುರಿತು ರೈಲ್ವೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.