Friday, April 11, 2025
Google search engine

Homeರಾಜ್ಯರಾಮನಗರ: ಶಾಸಕರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ರಾಮನಗರ: ಶಾಸಕರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

                               

ರಾಮನಗರ : ಅವರು ಇಂದು ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಮನಗರ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನುಡಿದಂತೆ ನಡೆಯುತ್ತಿರುವ ಸರ್ಕಾರವು ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 256370 ಅರ್ಹ ಮಹಿಳಾ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದಾರೆ. ಅದರಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲಿ 60570 ಮಹಿಳೆಯರು, ಹಾರೋಹಳ್ಳಿ ತಾಲ್ಲೂಕಿನಲ್ಲಿ 19224 ಮಹಿಳೆಯರು, ಕನಕಪುರ ತಾಲ್ಲೂಕಿನಲ್ಲಿ 68313 ಮಹಿಳೆಯರು, ಮಾಗಡಿ ತಾಲ್ಲೂಕಿನಲ್ಲಿ 48580 ಮಹಿಳೆಯರು ಹಾಗೂ ರಾಮನಗರ ತಾಲ್ಲೂಕಿನಲ್ಲಿ 59683 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು, ನೋಂದಣಿಯಾಗಿರುವ ಎಲ್ಲಾ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಯಾಗುತ್ತದೆ ಎಂದರು.

ಮಹಿಳೆಯರ ಬಗ್ಗೆ ಸುಧೀರ್ಘ ಆಯೋಚನೆಯನ್ನು ಮಾಡಿ ಈ ಹಿಂದೆ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲೀಕರಣಗೊಳ್ಳಲು, ಮಕ್ಕಳು ವಿದ್ಯಾವಂತರು,  ಹಾಗೂ ಜ್ಞಾನವಂತರಾಗಬೇಕು ಎನ್ನುವ ನಿಟ್ಟಿನಲ್ಲಿ ಸ್ತಿçàಶಕ್ತಿ ಯೋಜನೆಯನ್ನು ಜಾರಿಗೆ ತಂದರು.

ನಂತರ ಬಂದ ಸಿದ್ದರಾಮಯ್ಯನವರ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಬ್ಬರು ಹಸಿವಿನಿಂದ ಇರಬಾರದು ಎಂಬ ನಿಟ್ಟಿನಲ್ಲಿ ಅನ್ನಭಾಗ್ಯವನ್ನು ಜಾರಿಗೆ ತಂದರು. ರೈತರಿಗೆ ಕೃಷಿ ಭಾಗ್ಯ, ಪಶು ಭಾಗ್ಯ, ಮಕ್ಕಳಿಗೆ ಕ್ಷೀರ ಭಾಗ್ಯ, ಆರೋಗ್ಯ ಭಾಗ್ಯ ಹಾಗೂ ಇನ್ನಿತರೆ ಕಾರ್ಯಕ್ರಮವನ್ನು ಜಾರಿಗೆ ತಂದು ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಮಾಡಿದರು ಎಂದು ತಿಳಿಸಿದರು.

ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ತಿಳಿಸಲಾಗಿತ್ತು. ಅದರಂತೆ 5 ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೆ ತರಲಾಗಿದೆ. ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹ ಜ್ಯೋತಿ, ಗೃಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಹೆಣ್ಣು ಮಕ್ಕಳಿಗೆ ಎಷ್ಟೇ ಕಷ್ಟಗಳಿದ್ದರು ಸಹ ಅವರು ಮನೆಯನ್ನು ನಡೆಸಿಕೊಂಡು ಹೋಗುತ್ತಾರೆ. ಹೆಣ್ಣು ಮಕ್ಕಳು ಆರ್ಥಿಕವಾಗಿ ಸಬಲೀಕರಣ ಹೊಂದಲು ಪ್ರತಿ ಮಾಹೆ 2,000 ರೂ.ಗಳನ್ನು ಅವರ ಖಾತೆಗೆ ಜಮೆ ಮಾಡಲಾಗುವುದು ಎಂದರು.

ಕುಡಿಯುವ ನೀರಿನ ವ್ಯವಸ್ಥೆ: ರಾಮನಗರ ತಾಲ್ಲೂಕಿನಲ್ಲಿ ಪ್ರತಿ ಮನೆ ಮನೆಗೂ 24 ಗಂಟೆಗಳ ಕಾಲ ಕುಡಿಯುವ ನೀರು ಸರಬರಾಜಿನ ವ್ಯವಸ್ಥೆಗೆ ಈಗಾಗಲೇ ಕಾಮಗಾರಿ ಪ್ರಾರಂಭಗೊ0ಡಿದೆ. ಅತೀ ಶೀಘ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ರಸ್ತೆ: ಈಗಾಗಲೇ ಕುಡಿಯುವ ನೀರಿನ ವ್ಯವಸ್ಥೆಗೆ ರಸ್ತೆಗಳನ್ನು ಅಗೆದಿದ್ದು, ಕಾಮಗಾರಿ ಮುಗಿದ ನಂತರ ಪಟ್ಟಣ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆಗಳನ್ನು ಮಾಡಲಾಗುವುದು ಎಂದರು.

ಬಡವರಿಗೆ ಮನೆ ಹಾಗೂ ಸೈಟ್‌ಗಳನ್ನು ವಿತರಿಸುವ ಯೋಜನೆ, ಶಾಲಾ-ಕಾಲೇಜು ಕಟ್ಟಡದ ದುರಸ್ಥಿ, ಪಾರ್ಕ್ಗಳ ವ್ಯವಸ್ಥೆ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷರಾದ ಸೋಮಶೇಖರ್ (ಮಣಿ), ನಗರಸಭೆ ಸದಸ್ಯರು ಹಾಗೂ ಮಾಜಿ ನಗರಸಭೆ ಅಧ್ಯಕ್ಷರಾದ ಶೇಷಾದ್ರಿ ಶಶಿ, ನಗರಸಭೆ ಸದಸ್ಯರಾದ ಜಯಲಕ್ಷö್ಮಮ್ಮ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಚಿಕ್ಕಸುಬ್ಬಯ್ಯ, ನಗರಸಭೆ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾರಾಯಣ ಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಮಹಿಳಾ ಫಲಾನುಭವಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular