Thursday, April 17, 2025
Google search engine

Homeರಾಜ್ಯಬಿಜೆಪಿ ತೊರೆದು ಕಾಂಗ್ರೆಸ್‌ಗೆ ರಾಮಣ್ಣ ಲಮಾಣಿ ಸೇರ್ಪಡೆ: ಮಾಜಿ ಶಾಸಕರ ಸ್ಪಷ್ಟನೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ರಾಮಣ್ಣ ಲಮಾಣಿ ಸೇರ್ಪಡೆ: ಮಾಜಿ ಶಾಸಕರ ಸ್ಪಷ್ಟನೆ

ಗದಗ: ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ರಾಮಣ್ಣ ಲಮಾಣಿ ಸೇರಿದಂತೆ ವಿವಿಧ ಮಾಜಿ ಶಾಸಕರು ಅ. ೧೦ ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇವೆ ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು. ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಕುಂದ್ರಳ್ಳಿ ಗ್ರಾಮದ ಮನೆಯಲ್ಲಿ ಮಾಧ್ಯಮದವರ ಮುಂದೆ ಮಾತನಾಡಿದರು.

ಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನೀನು ರಾಮಣ್ಣ ಲಮಾಣಿಯವರ ಅಭಿಮಾನಿ ನಮ್ಮ ಹತ್ತಿರ ಬರುವುದಕ್ಕೆ ಹೋಗಬೇಡ ಎಂದು ಹೇಳುತ್ತಿರುತ್ತಾರೆ ಎಂದು ನನ್ನ ಕಾರ್ಯಕರ್ತರು ತಿಳಿಸಿದರು. ಇದರಿಂದ ಮನಸ್ಸಿಗೆ ಬೇಜಾರಾಗಿ ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಬಂದಿದ್ದೇನೆ. ಅವರು ಅ. ೧೦ಕ್ಕೆ ಬಹಳಷ್ಟು ಮಾಜಿ ಶಾಸಕರು ಬರುತ್ತಿದ್ದಾರೆ. ಅಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗು ಎಂದು ತಿಳಿಸಿದ್ದಾರೆ ಎಂದು ರಾಮಣ್ಣ ಲಮಾಣಿ ಸ್ಪಷ್ಟನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular