ಮಂಡ್ಯ: ತಾಲೂಕಿನ ಕಾರಸವಾಡಿ ಗ್ರಾಮದಲ್ಲಿ ಸಂತೆಕಸಲಿಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಗೆ ಶಾಸಕ ಶ್ರೀರಂಗಪಟ್ಟಣದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು.
ಬಳಿಕ ಕಾರಸವಾಡಿ ಗ್ರಾಮಸ್ಥರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವ ವ್ಯವಸ್ಥೆ ಮಾಡಲು ಸೂಚಿಸಿದರು.

ಇದೇ ವೇಳೆ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ತಾ.ಪಂ. ಇ ಓ ವೀಣಾ, ಕಂದಾಯ ಇಲಾಖೆ ಉಪತಶೀಲ್ದಾರ್ ತಮ್ಮಣ್ಣ ಗೌಡ, ಗ್ರಾ ಪಂ ಪಿಡಿಒ ಜಯಪ್ಪ, ಗ್ರಾ.ಪಂ.ಅಧ್ಯಕ್ಷ ರಾಜೇಶ್, ಸದಸ್ಯ ರವೀಶ್ ,ಬಸವರಾಜು ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.