Friday, April 4, 2025
Google search engine

Homeರಾಜ್ಯಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ- ಡಿಕೆಶಿ

ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ- ಡಿಕೆಶಿ

ಬೆಂಗಳೂರು: ವೈಟ್ ಪೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಬೆಂಗಳೂರಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರೊಂದಿಗೆ ರಾಮೇಶ್ವರಂ ಕೆಫೆಗೆ ತೆರಳಿ, ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮಧ್ಯಾಹ್ನ 12ರ ಸುಮಾರಿಗೆ 30 ವರ್ಷದ ಯುವಕನೊಬ್ಬ ಬ್ಯಾಗ್ ತಂದಿಟ್ಟಿದ್ದು, ನಂತರ ಟೋಕನ್ ಪಡೆದು ರವೆ ಇಡ್ಲಿ ಸೇವಿಸಿ ಹೋಗಿದ್ದಾನೆ. ಟೈಮರ್ ಬಳಸಿ ಮಧ್ಯಾಹ್ನ 12-55ರ ಸುಮಾರಿಗೆ ಕಡಿಮೆ ತೀವ್ರತೆ ಬಾಂಬ್ ಸ್ಫೋಟಿಸಲಾಗಿದೆ. ಇದರಿಂದಾಗಿ ಗ್ರಾಹಕರು, ಸಿಬ್ಬಂದಿ ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.

ಕೆಫೆಯಲ್ಲಿ ಬ್ಯಾಗ್ ತಂದಿಟ್ಟ ಯುವಕನ ಚಹರೆ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಆತನ ಪತ್ತೆಗಾಗಿ 7-8 ಸಿಸಿಬಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿತ ಯುವಕನನ್ನು ಬಂಧಿಸಲಿದ್ದಾರೆ. ಬೆಂಗಳೂರು ನಗರ ಸುರಕ್ಷಿತವಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.

RELATED ARTICLES
- Advertisment -
Google search engine

Most Popular