Thursday, April 17, 2025
Google search engine

Homeರಾಜ್ಯರಾಮನಗರ ಮರುನಾಮಕರಣ ಬೇಡ: ಸಿಎಂಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ

ರಾಮನಗರ ಮರುನಾಮಕರಣ ಬೇಡ: ಸಿಎಂಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಮರುನಾಮಕರಣಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡದಂತೆ ಸಿಎಂ ಸಿದ್ಧರಾಮಯ್ಯಗೆ ಸಂಸದ ಡಾ.ಸಿಎನ್ ಮಂಜುನಾಥ್ ಪತ್ರ ಬರೆದು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯೆ ಸಮಂಜಸವಾಗಿರುವುದಿಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಿದವರು ರಾಜ್ಯದ ಹೆಸರಾಂತ ಮಾಜಿ ಮುಖ್ಯ ಮಂತ್ರಿಯವರಾದ ದಿವಂಗತ ಕೆಂಗಲ್ ಹನುಮಂತಯ್ಯನವರು ಎಂದಿದ್ದಾರೆ.

ಬೆಂಗಳೂರು ನಿರ್ಮಾತೃಗಳಾದ ನಾಡಪ್ರಭು ಕೆಂಪೆಗೌಡರು ಸಹ ಈ ಜಿಲ್ಲೆಗೆ ಸೇರಿದವರು . ರಾಮನಗರ ಜಿಲ್ಲೆಯು ರಾಜ್ಯಕ್ಕೆ ಐದು ಬಾರಿ. ಮುಖ್ಯಮಂತ್ರಿ ಪದವಿಯನ್ನು ನೀಡಿದೆಯಲ್ಲದೆ ರಾಮನಗರದಿಂದ ಗೆದ್ದು ಮುಖ್ಯಮಂತ್ರಿಯವರಾಗಿದ್ದ ಹೆಚ್.ಡಿ. ದೇವೇಗೌಡರವರು ಈ ದೇಶದ ಪ್ರಧಾನಿಯಾಗಿದ್ದರು. ರಾಮನಗರ ಕಣ್ವ ಮಹರ್ಷಿಯ ನಾಡು, ರಾಮಾಯಣದಲ್ಲಿನ ಶ್ರೀ ರಾಮಚಂದ್ರರು ರಾಮಲಲಯಲ್ಲಿ ತಂಗಿರುವ ಇತಿಹಾಸವಿದೆ.

ಈಗಾಗಲೇ ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ಧಿಯಾಗಿದೆ. ಇದರ ಜೊತೆಗೆ ರಾಮನಗರದ ಹೆಸರು ಹೇಳುತ್ತಿದಂತೆ ಜಾನಪದ ಲೋಕ, ಚನ್ನಪಟ್ಟಣದ ಗೊಂಬೆಗಳು, ಅರ್ಕಾವತಿ, ಕಾವೇಲಿ, ಶಿಂಷಾ, ಕಣ್ವ ನದಿಗಳು, ಮಂಚನಬೆಲೆ, ಬೈರಮಂಗಲ, ಹಾರೋಬೆಲೆ, ಕಣ್ವ ಮತ್ತು ಇಗ್ಗಲೂರು ಜಲಾಶಯಗಳು, ರಾಮಣಲ, ಕೃಷ್ಣಣಲ, ರೇವಣ್ಣಸಿದ್ದೇಶ್ವರ ಬೆಟ್ಟ, ಯತಿರಾಜಲ, ಸೋಮಲಲ, ಸಿಡಿಲಕಲ್ಲು ಮತ್ತು ಜಲಸಿದ್ಧೇಶ್ವರ ಬೆಟ್ಟ, ಕಬ್ಬಾಳುದುರ್ಗ, ಸಾವನದುರ್ಗ, ಮೇಕೆದಾಟು ಮುಂತಾದವುಗಳು ನೆನಪಿಗೆ ಬರುತ್ತವೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ರಾಮನಗರ ಎಂಬ ಹೆಸರೇ ರಕ್ಷಾಕವಚದಂತಿದೆ.

ಅಭಿವೃದ್ಧಿಯ ದೃಷ್ಟಿಯಿಂದಲೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರಾಂಡ್ ರಾಮನಗರವನ್ನಾಗಿ ಮಾಡಿ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ. ರಾಮನಗರಕ್ಕೆ ತನ್ನದೆ ಇತಿಹಾಸ ಇರುವುದರಿಂದ ಜಿಲ್ಲೆಗೆ ಮರುನಾಮಕರಣ ಮಾಡುವುದು ಸರಿಯಾದ ಕ್ರಮವಲ್ಲ.

ಅಲ್ಲದೇ ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದ್ದು, ಇಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕವಾಗಿದೆ. ರಾಮನಗರ ಜಿಲ್ಲೆಯು ರೈತರ ಜಿಲ್ಲೆಯಾಗಿ ಉಳಿಯಬೇಕೆ ಹೊರತು ರಿಯಲ್ ಎಸ್ಟೇಟ್ ಆಳುವವರ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿಯ ಬೆಲೆ ಅಧಿಕವಾಗುವುದಕ್ಕಿಂತ ರೈತರು ಬೆಳೆದ ಬೆಳೆಯ ಬೆಲೆಯು ಅಧಿಕವಾಗಬೇಕು. ದಯವಿಟ್ಟು ಸನ್ಮಾನ್ಯ ಮುಖ್ಯಮಂತ್ರಿಯವರು ಈ ಪ್ರಸ್ತಾವನೆಯನ್ನು ತಿರಸ್ಕರಿಸಬೇಕಾಗಿ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular