ರಾಮನಗರ: ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಸಂಬAಧ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರುಗಳಲ್ಲಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳ ಮೀಸಲಾತಿಯನ್ನು ಎರಡನೇ ಅವಧಿಗೆ ಇಂದು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮೀಸಲಾತಿ ನಿಗದಿಪಡಿಸುವ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳ ಮೀಸಲಾತಿಯನ್ನು ಕಂಪ್ಯೂಟರ್ ತಂತ್ರಾAಶದ ಮೂಲಕ 20 ಗ್ರಾಮ ಪಂಚಾಯಿತಿಗಳಿಗೆ ನಿಗದಿಪಡಿಸಿದೆ ಎಂದು ತಿಳಿಸಿದರು.
ರಾಮನಗರ ತಾಲ್ಲೂಕಿನಲ್ಲಿರುವ 20 ಗ್ರಾಮ ಪಂಚಾಯಿತಿಗಳಲ್ಲಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯು, 10 ಸಾಮಾನ್ಯ ವರ್ಗದಲ್ಲಿ 4 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ್ಟ ಜಾತಿಯ 4 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ್ಟ ಪಂಗಡದ ಒಂದು ಸ್ಥಾನವನ್ನು ಮಹಿಳೆಗೆ ಮೀಸಲಿಡಲಾಗಿದೆ. ಸಾಮಾನ್ಯ –ಎ ವರ್ಗದಲ್ಲಿ 4 ಸ್ಥಾನಗಳಿದ್ದು ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು ಹಾಗೂ ಸಾಮಾನ್ಯ ಬಿ ವರ್ಗ ಒಂದು ಸ್ಥಾನ ಅದು ಮಹಿಳೆಗೆ ಮೀಸಲಾಗಿರುತ್ತದೆ ಎಂದು ತಿಳಿಸಿದರು.
ಬೈರಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ವರ್ಗ ಎ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ – ಪರಿಶಿಷ್ಟ ಜಾತಿ, ಗೋಪಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ, ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಎ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಮಹಿಳೆ, ಬನ್ನಿಕುಪ್ಪೆ(ಬಿ)ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ, ಉಪಾಧ್ಯಕ್ಷ ಸ್ಥಾನ – ಸಾಮಾನ್ಯ ಎ ವರ್ಗ ಮಹಿಳೆ, ಹರೀಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಪರಿಶಿಷ್ಟ ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ವರ್ಗ, ಬಿಳಗುಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ , ಉಪಾಧ್ಯಕ್ಷ ಸ್ಥಾನ-ಸಾಮಾನ್ಯ ಎ ವರ್ಗ , ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಎ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ವರ್ಗ , ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ, ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ವರ್ಗ ಎ, ಉಪಾಧ್ಯಕ್ಷ ಸ್ಥಾನ -ಪರಿಶಿಷ್ಟ ಜಾತಿ ಮಹಿಳೆ, ದೊಡ್ಡಗಂಗವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಪರಿಶಿಷ್ಟ ಜಾತಿ , ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ವರ್ಗ ಮಹಿಳೆ, ಅಕ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ, ಹುಲಿಕೆರೆ ಗುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ, ಉಪಾಧ್ಯಕ್ಷ ಸ್ಥಾನ-ಸಾಮಾನ್ಯ ಮಹಿಳೆ, ಜಾಲಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ,ಲಕ್ಷಿö್ಮÃಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಪರಿಶಿಷ್ಟ ಜಾತಿ ಉಪಾಧ್ಯಕ್ಷ ಸ್ಥಾನ-ಸಾಮಾನ್ಯ ವರ್ಗ ಮಹಿಳೆ, ಕೈಲಾಂಚ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಬಿ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ -ಪರಿಶಿಷ್ಟ ಜಾತಿ, ಹುಣಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ವರ್ಗ, ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ಎ ವರ್ಗ ಮಹಿಳೆ, ಬನ್ನಿಕುಪ್ಪೆ(ಕೈ) ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ವರ್ಗ , ಉಪಾಧ್ಯಕ್ಷ ಸ್ಥಾನ -ಸಾಮಾನ್ಯ ಬಿ ವರ್ಗ ಮಹಿಳೆ, ವಿಭೂತಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ ಎ ವರ್ಗ , ಉಪಾಧ್ಯಕ್ಷ ಸ್ಥಾನ -ಪರಿಶಿಷ್ಟ ಜಾತಿ ಮಹಿಳೆ ಹಾಗೂ ಶ್ಯಾನುಬೋಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ-ಸಾಮಾನ್ಯ, ಉಪಾಧ್ಯಕ್ಷ ಸ್ಥಾನ-ಪರಿಶಿಷ್ಟ ಪಂಗಡ ಮಹಿಳೆಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಬಿ.ಸಿ, ತಹಶೀಲ್ದಾರ್ ತೇಜಸ್ವಿನಿ ಹಾಗೂ ರಾಮನಗರ ತಾಲ್ಲೂಕು ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.