ಬೆಂಗಳೂರು : ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾ ಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ACJM ಕೋರ್ಟಿಗೆ ಸಲ್ಲಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ್ದ ಸ್ಕ್ರೀನ್ ಶಾಟ್, ಆರೋಪಿಗಳ ಮೊಬೈಲ್, ದೂರುದಾರೆ ರಮ್ಯಾ ಸ್ಟೇಟ್ಮೆಂಟ್, ಹಾಗೂ ಎಫ್ ಎಸ್ ಎಲ್ ವರದಿ ಆರೋಪಿಗಳ ಸ್ವ ಇಚ್ಚ ಹೇಳಿಕೆ ಆಧಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಸಾಕ್ಷಿ ಆಧಾರಗಳು ಲಭಿಸಿದ ಹಿನ್ನೆಲೆಯಲ್ಲಿ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನೂ ಆರು ಆರೋಪಿಗಳು ಪೊಲೀಸರಿಗೆ ಸಿಕ್ಕಿಲ್ಲ. ಇನ್ನುಳಿದವರು ಸಿಕ್ಕ ಬಳಿಕ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗುತ್ತಿದೆ. ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನೂ ನಾಲ್ವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ ಸಿಸಿಬಿ ಪೊಲೀಸರು ಶೀಘ್ರದಲ್ಲಿಯೇ ಟ್ರಯಲ್ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.