ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು ,ಈ ನಡುವೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಬೆಳಗಾವಿಯ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸಿಂಗ್ ಅವರನ್ನ ಶಾಸಕ ಲಕ್ಷ್ಮಣ್ ಸವದಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾಗತಿಸಿದರು. ಎಂಎಲ್ ಸಿ ಚನ್ನರಾಜು ಹಟ್ಟಿಹೋಳಿ ಸಾಥ್ ನೀಡಿದರು.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಗೆಲುವಿನ ಭಾಗವಾಗಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಸದ್ಯದ ಬೆಳಗಾವಿ ಸ್ಥಿತಿಗತಿ ಹಾಗೂ ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಕೌಂಟರ್ ಕೊಡಲು ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.