ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಾಗೂ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಹಿನ್ನೆಲೆ ಸಾರ್ವಜನಿಕರು, ಪ್ರವಾಸಿಗರ ಹಿತದೃಷ್ಟಿಯಿಂದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರ ಸ್ಥಗಿತ ಮಾಡಲಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಜುಲೈ 19ರಿಂದಲೇ ದೋಣಿ ವಿಹಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶಾವಕಾಶ ನೀಡಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.