ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ ೨೪ ವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣರನ್ನು ಜೂನ್ ೨೪ರವರೆಗೆ ಎಸ್ ಐಟಿ ಕಸ್ಟಡಿಗೆ ನೀಡುವಂತೆ ಬೆಂಗಳುರಿನ ೪೨ ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಮೂರನೇ ಅತ್ಯಾಚಾರ ಪ್ರಕರಣ ಸಂಬಂಧ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ್ ಸ್ಯಾಂಪಲ್ಸ್, ವೈದ್ಯಕೀಯ ಪರೀಕ್ಷೆ ಹಿನೆಲೆಯಲ್ಲಿ ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಎಸ್ ಐಟಿ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಪ್ರಜ್ವಲ್ ರೇವಣ್ಣರನ್ನು ಜೂನ್ ೨೪ ವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ