ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.
ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ ಅಕ್ಟೋಬರ್ 19 ರವರೆಗೆ ಅಂದರೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ದಾಖಲಿಸಿದ್ದು ತನಿಖೆ ನಡೆಯುತ್ತಿದೆ.