ದಾವಣಗೆರೆ: ಕೇವಲ 7 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಭಾನುವಾರ ಸಂಜೆ, ಬಾಲಕಿ ತನ್ನ ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ, ಆಕೆಯ ಹತ್ತಿರದ ಮನೆ ಮಕ್ಕಳಾದ 15 ಹಾಗೂ 17 ವರ್ಷದ ಇಬ್ಬರು ಬಾಲಕರು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಾಲಕಿ ನಾಪತ್ತೆಯಾದ ನಂತರ ಆಕೆಯ ತಾಯಿ ಕೂಡಲೇ ಹುಡುಕಾಟ ಆರಂಭಿಸಿದ್ದು, ಮಗಳನ್ನು ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದು ಗೊತ್ತಾಗಿದೆ.
ಘಟನೆ ಖಚಿತವಾಗುತ್ತಿದ್ದಂತೆಯೇ ತಾಯಿ ಪೊಲೀಸರು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಪೊಲೀಸರು ಕೂಡಲೇ ಪ್ರಸ್ತುತ ಬಾಲಕರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರಿಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ದೌರ್ಜನ್ಯಕ್ಕೊಳಗಾದ ಬಾಲಕಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗಿದೆ.