Friday, April 4, 2025
Google search engine

Homeರಾಜ್ಯಬೆಂಗಳೂರಿಗೆ ಆಗಮಿಸಿದ ರಾಷ್ಟಪತಿ ದ್ರೌಪದಿ ಮುರ್ಮು

ಬೆಂಗಳೂರಿಗೆ ಆಗಮಿಸಿದ ರಾಷ್ಟಪತಿ ದ್ರೌಪದಿ ಮುರ್ಮು

ಬೆಂಗಳೂರು: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಹೆಚ್.ಎ.ಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಲೆಫ್ಟಿನೆಂಟ್ ಜನರಲ್ ಜೆ.ಕೆ. ಗೇರಾ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ. ಜಿ., ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಗೌರವಾನ್ವಿತ ರಾಷ್ಟ್ರಪತಿಗಳು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದಿ ಆರ್ಟ್ ಆಪ್ ಇಂಟರ್ ನ್ಯಾಷನಲ್ ಲಿವಿಂಗ್ ಸೆಂಟರ್ ಗೆ ತೆರಳಿದರು.

RELATED ARTICLES
- Advertisment -
Google search engine

Most Popular