Friday, April 18, 2025
Google search engine

HomeUncategorizedರಾಷ್ಟ್ರೀಯಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ: ಮಹಾರಾಷ್ಟ್ರ ಸಿಎಂ

ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ: ಮಹಾರಾಷ್ಟ್ರ ಸಿಎಂ

ಮುಂಬೈ: ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಅನಾರೋಗ್ಯದ ಹಿನ್ನೆಲೆ ರತನ್​ ಟಾಟಾ ಅವರು ಮುಂಬೈ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ರಾತ್ರಿ ನಿಧನರಾಗಿದ್ದಾರೆ.

“ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ ರತನ್​ ಟಾಟಾ. 150 ವರ್ಷಗಳಷ್ಟು ಹಳೆಯ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡಿಸಿದ ಜೀವಂತ ದಂತಕಥೆಯಾಗಿದ್ದರು. ರತನ್ ಟಾಟಾ ಜಿ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನೀಡಲಾಗುವುದು” ಎಂದು ಎಕ್ಸ್​​ ಪೋಸ್ಟ್‌ನಲ್ಲಿ, ಸಿಎಂ ಶಿಂಧೆ ತಿಳಿಸಿದ್ದಾರೆ.

ರತನ್​ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ರತನ್​ ಅವರು ದೇಶದ ಹೆಮ್ಮೆ. ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಸದಾ ಸ್ಪೂರ್ತಿಯಾಗಿದ್ದಾರೆ. 26/11(ಮುಂಬೈ ತಾಜ್​ ಹೋಟೆಲ್​ ದಾಳಿ) ಭಯೋತ್ಪಾದನಾ ದಾಳಿಯ ಸಂದರ್ಭದಲ್ಲಿ ಅವರು ಪ್ರದರ್ಶಿಸಿದ ದೃಢತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದು ಮುಖ್ಯಮಂತ್ರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮುಂಬೈ ಟಾಟಾ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಸಿದ್ಧಾರ್ಥ್ ಶರ್ಮಾ ಅವರು, “ಭಾರತದ ನಾಗರಿಕತೆಯ ಮೌಲ್ಯಗಳಲ್ಲಿ ಬೇರೂರಿರುವ ಮತ್ತು ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಿರುವ ಅವರ ಪರಂಪರೆಯನ್ನು ಮುಂದಕ್ಕೆ ಸಾಗಿಸಲು ನಾವು ನಮ್ಮನ್ನು ಪುನರ್ ಸಮರ್ಪಿಸಿಕೊಳ್ಳುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಟಾಟಾ ಟ್ರಸ್ಟ್‌ ಗಳು ಲಾಭೋದ್ದೇಶವಿಲ್ಲದ ಸಮೂಹವಾಗಿದೆ. ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣವನ್ನು ಪಡೆದ ರತನ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ರತನ್ ಟಾಟಾ ಅವರ ಭೌತಿಕ ಉಪಸ್ಥಿತಿಯನ್ನು ನಾವು ಕಳೆದುಕೊಂಡಿದ್ದೇವೆ. ಆದರೆ, ಅವರು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿಎಂದಿಗೂ ಶಾಶ್ವತ” ಎಂದು ಭಾವನಾತ್ಮಕವಾಗಿ ಶರ್ಮಾ ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular