Saturday, April 19, 2025
Google search engine

HomeUncategorizedರಾಷ್ಟ್ರೀಯಪಡಿತರ ಹಗರಣ: ಕೋಲ್ಕತ್ತದ ಹಲವೆಡೆ ಇಡಿ ದಾಳಿ

ಪಡಿತರ ಹಗರಣ: ಕೋಲ್ಕತ್ತದ ಹಲವೆಡೆ ಇಡಿ ದಾಳಿ

ಕೋಲ್ಕತ್ತ: ಬಹುಕೋಟಿ ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ನಗರದ ಹಲವೆಡೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೇಂದ್ರ ಭದ್ರತಾ ಪಡೆಗಳೊಂದಿಗೆ ಇ.ಡಿ ಅಧಿಕಾರಿಗಳು ಸಾಲ್ಟ್ ಲೇಕ್, ಕೈಖಾಲಿ, ಮಿರ್ಜಾ ಗಾಲಿಬ್ ಸ್ಟ್ರೀಟ್, ಹೌರಾ ಸೇರಿದಂತೆ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲ್ಪಟ್ಟವರನ್ನು ವಿಚಾರಣೆ ನಡೆಸಿದ ವೇಳೆ ಇತರೆ ಕೆಲವರು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇಂದು ಹಲವೆಡೆ ಶೋಧ ಕಾರ್ಯ ನಡೆಸಲಾಗಿದೆ ಎಂದು ಇ.ಡಿ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಡಿತರ ವಿತರಣೆ ಹಗರಣದಲ್ಲಿ ಭಾಗಿಯಾಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್‌ನ ( ಟಿಎಂಸಿ) ಮುಖಂಡರೊಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular