ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ತಮ್ಮ ಇನ್‌ಸ್ಟಾಗ್ರಾಂ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಚಿನ್ ಅವರು ತಮ್ಮ ಪೋಸ್ಟ್‌ನಲ್ಲಿ, “ಈ ದುಃಖದ ಘಟನೆಯಿಂದ ಬಹಳ ಬಳಲಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದು, ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಚಿನ್ ಅವರ ಈ ಸಂತಾಪ ಸಂದೇಶಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದು, ಈ ದುರಂತವನ್ನು ಮಾನವೀಯ ದೃಷ್ಟಿಕೋನದಿಂದ ನೋಡಬೇಕು ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.