ಬೆಂಗಳೂರು: ಬಿಎಂಟಿಸಿ ಸಾರಿಗೆ ಸಂಸ್ಥೆಯಲ್ಲಿ ೨,೫೦೦ ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ ವಿವರವಾದ ಅಧಿಸೂಚನೆ ಹೊರಡಿಸಿದೆ.
ಬಿಎಂಟಿಸಿ ಮಿಕ್ಕುಳಿದ ವೃಂದದಲ್ಲಿ ೨೨೮೬ (ಆರ್‌ಪಿಸಿ) ಹಾಗೂ ಸ್ಥಳೀಯ ವೃಂದ (ಹೈ,ಕ) ೨೧೪ ಹುದ್ದೆಗಳಿದ್ದುಒಟ್ಟಾರೆಯಾಗಿ ಮಹಿಳೆಯರಿಗೂ ೮೨೫ ಹುದ್ದೆಗಳು ಮೀಸಲಿವೆ. ಮಾರ್ಚ್ ೧೦ ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಏಪ್ರಿಲ್ ೧೦ ರಂದು ಮುಕ್ತಾಯವಾಗಲಿದೆ. cetonline. karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪಿಯುಸಿ, ಸಿಬಿಎಸ್‌ಸಿ ೧೦+೨, ಮೂರು ವರ್ಷದ ಡಿಪ್ಲೋಮಾ ಅಥವಾ ಅದಕ್ಕೆ ಸಮಾನವಾದ ಶೈಕ್ಷಣಿಕ ಅರ್ಹತೆ ಜೊತೆಗೆ `ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್’ ಅನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು.
ಬಾಹ್ಯ ಕೋರ್ಸ್ ಮತ್ತು ಜೆಒಸಿ ಕೋರ್ಸ್ ಮುಗಿಸಿದವರು ಅರ್ಹರಲ್ಲ. ಅರ್ಜಿ ಸಲ್ಲಿಸಲು ಕನಿಷ್ಠ ೧೮ ವರ್ಷ ಪೂರ್ಣಗೊಂಡಿರಬೇಕು. ಗರಿಷ್ಠ ಸಾಮಾನ್ಯ ವರ್ಗದವರಿಗೆ ೩೫ ವರ್ಷಗಳು, ೨ಎ, ೨ಬಿ, ೩ಎ, ೩ಬಿ ಗಳಿಗೆ ೩೮ ವರ್ಷಗಳು, ಎಸ್‌ಸಿ, ಎಸ್‌ಟಿ, ಪ್ರವರ್ಗ೧ ದವರಿಗೆ ೪೦ ಹಾಗೂ ಮಾಜಿ ಸೈನಿಕರಿಗೆ ೪೫ ವರ್ಷದವರೆಗೆ ಮಿತಿ ಇದೆ. ಅರ್ಜಿ ಶುಲ್ಕ ಸಾಮಾನ್ಯ ವರ್ಗ, ೨ಎ, ೨ಬಿ, ೩ಎ, ೩ಬಿ ವರ್ಗದವರಿಗೆ ೭೦೦ ಮತ್ತು ಎಸ್‌ಸಿ, ಎಸ್‌ಟಿ, ಪ್ರವರ್ಗ೧, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ೫೦೦. ಅರ್ಜಿ ಸಲ್ಲಿಸಿದವರಿಗೆ ಲಿಖಿತ ಪರೀಕ್ಷೆ ಆ ನಂತರ ದೇಹದಾರ್ಡ್ಯತೆ ಪರೀಕ್ಷೆ ಇರಲಿದೆ. ಸಂದರ್ಶನ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಕೆಇಎ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು