Thursday, April 3, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಅತಿಥಿ ಉಪನ್ಯಾಸಕರ ನೇಮಕ: ಇಂದಿನಿಂದ ಅರ್ಜಿ ಸಲ್ಲಿಕೆ

ಅತಿಥಿ ಉಪನ್ಯಾಸಕರ ನೇಮಕ: ಇಂದಿನಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದ್ದು, ಅರ್ಜಿ ಸಲ್ಲಿಕೆಗೆ ಜ.8ರವರೆಗೆ ಅವಕಾಶ ನೀಡಲಾಗಿದೆ.

ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ.

ಹೈಕೋರ್ಟ್‌ ನಿರ್ದೇಶನದಂತೆ ಯುಜಿಸಿ ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಬೇಕಿದೆ. ತೀರ್ಪು ಪ್ರಶ್ನಿಸಿ, ರಾಜ್ಯ ಸರ್ಕಾರ ಪನರ್‌ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಪ್ರಕರಣವು ವಿಚಾರಣೆಯ ಹಂತದಲ್ಲಿದೆ. ಈಗಾಗಲೇ 2, 4 ಹಾಗೂ 6ನೇ ಸೆಮಿಸ್ಟರ್‌ ತರಗತಿಗಳು ಆರಂಭವಾಗಿರುವ ಕಾರಣ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಯುಜಿಸಿ ಅರ್ಹತೆ ಇಲ್ಲದವರನ್ನೂ ನೇಮಕ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಈ ನೇಮಕ ಹೈಕೋರ್ಟ್‌ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಹೇಳಿದ್ದಾರೆ.

ಜ.3ರಿಂದಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಜ.9ರಂದು ಮೆರಿಟ್‌ ಪಟ್ಟಿ ಪ್ರಕಟಿಸಲಾಗುವುದು. ಜ.20ರಿಂದ 29ರವರೆಗೆ ಕಾಲೇಜುಗಳ ಆಯ್ಕೆಗೆ ಕೌನ್ಸೆಲಿಂಗ್‌ ನಡೆಸಲಾಗುವುದು. 30ರಂದು ಆಯ್ಕೆಯಾದವರ ಅಂತಿಮಪಟ್ಟಿ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.

RELATED ARTICLES
- Advertisment -
Google search engine

Most Popular