Friday, April 4, 2025
Google search engine

Homeರಾಜ್ಯಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿಪ್ರಕ್ರಿಯೆ ಏಪ್ರಿಲ್‌ನೊಳಗೆ ಪೂರ್ಣ: ಕೆ.ಜೆ. ಜಾರ್ಜ್

ಮೂರು ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿಪ್ರಕ್ರಿಯೆ ಏಪ್ರಿಲ್‌ನೊಳಗೆ ಪೂರ್ಣ: ಕೆ.ಜೆ. ಜಾರ್ಜ್

ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ ೩,೦೦೦ ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ ೧೧ ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದೆ. ಪ್ರಸ್ತಕ ವರ್ಷ ೧೯ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ” ಎಂದು ಸ್ಪಷ್ಟಪಡಿಸಿದರು.

ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. ೫೦ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ೩೦ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.೨೦ ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ೨.೫ ಲಕ್ಷ ಅಕ್ರಮ ಕೃಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

RELATED ARTICLES
- Advertisment -
Google search engine

Most Popular