Monday, December 2, 2024
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಇಂದು- ನಾಳೆ PDO ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇಂದು- ನಾಳೆ PDO ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನ.16 ಮತ್ತು 16 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ನ.16 ರಂದು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ನ.17 ರಂದು ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular