Tuesday, November 11, 2025
Google search engine

Homeರಾಜ್ಯಸುದ್ದಿಜಾಲRed Fort blast: ಮೃತರ ಸಂಬಂಧಿಕರಿಗೆ ರೂ.10 ಲಕ್ಷ, ಗಂಭೀರ ಗಾಯಾಳುಗಳಿಗೆ ರೂ. 2 ಲಕ್ಷ...

Red Fort blast: ಮೃತರ ಸಂಬಂಧಿಕರಿಗೆ ರೂ.10 ಲಕ್ಷ, ಗಂಭೀರ ಗಾಯಾಳುಗಳಿಗೆ ರೂ. 2 ಲಕ್ಷ ಪರಿಹಾರ ಘೋಷಿಸಿದ ರೇಖಾಗುಪ್ತಾ!

ವರದಿ :ಸ್ಟೀಫನ್ ಜೇಮ್ಸ್.

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಸಂಜೆ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ರೂ. 10 ಲಕ್ಷ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಿಸಿದ್ದಾರೆ.

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ ರೂ. 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ದೆಹಲಿಯಲ್ಲಿ ನಡೆದ ದುರದೃಷ್ಟಕರ ಘಟನೆಯು ಇಡೀ ನಗರವನ್ನು ಆಘಾತವನ್ನುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ. ದೆಹಲಿ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ಪರಿಹಾರಕ್ಕಾಗಿ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular