Friday, April 11, 2025
Google search engine

Homeರಾಜ್ಯಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ

ಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯಾಗಿರುವುದು ರಾಜಧಾನಿ ಜನರನ್ನು ಹೈರಾಣಾಗಿಸಿದೆ. ಪ್ರತಿನಿತ್ಯ ಕಚೇರಿಗೆ, ವ್ಯವಹಾರಕ್ಕೆ ಮೆಟ್ರೊದಲ್ಲಿ ಸಂಚರಿಸುತ್ತಿದ್ದವರು ಅದಕ್ಕಿಂತ ನಮ್ಮ ಟೂ ವೀಲರೇ ಬೆಸ್ಟ್ ಎಂದು ಸ್ವಂತ ಗಾಡಿಯಲ್ಲಿ ಓಡಾಡುವ ಪರಿಸ್ಥಿತಿ ಬಂದಿದೆ.

ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಸ್ಯೆ ಕುರಿತು ಇದೀಗ ಮಧ್ಯ ಪ್ರವೇಶಿಸಿದ್ದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಎಂ ಮಹಾಬಲೇಶ್ವರ ರಾವ್ ಅವರ ಜೊತೆ ಮಾತನಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ಮೆಟ್ರೊ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್ ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲು ಮತ್ತು ದರಗಳನ್ನು ಕಡಿಮೆ ಮಾಡಲು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ ಎಂಡಿ ಅವರನ್ನು ಕೇಳಿದ್ದೇನೆ. ಪ್ರಯಾಣಿಕರ ಹಿತ ಕಾಪಾಡುವುದು ಮುಖ್ಯ ಎಂದು ಅವರಿಗೆ ಮನವರಿಕೆ ಮಾಡಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular