Monday, April 21, 2025
Google search engine

Homeರಾಜ್ಯಸುದ್ದಿಜಾಲನಿಯಮಿತ ಆಹಾರ ಪದ್ಧತಿ ಉತ್ತಮ ಆರೋಗ್ಯಕ್ಕೆ ರಹದಾರಿ-ಡಾ.ಸಂದೀಪ್

ನಿಯಮಿತ ಆಹಾರ ಪದ್ಧತಿ ಉತ್ತಮ ಆರೋಗ್ಯಕ್ಕೆ ರಹದಾರಿ-ಡಾ.ಸಂದೀಪ್

ಪಿರಿಯಾಪಟ್ಟಣ: ನಿಯಮಿತ ಆಹಾರ ಪದ್ಧತಿಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂದೀಪ್ ತಿಳಿಸಿದರು.
ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಎರಡನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು, ನಾವೆಲ್ಲರು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಉತ್ತಮ ಹವ್ಯಾಸಗಳ ಜೀವನ ಶೈಲಿ ಅಳವಡಿಸಿಕೊಳ್ಳಬೇಕಿದೆ, ಇತ್ತೀಚಿನ ದಿನಗಳಲ್ಲಿ ಯಾವುದೇ ಔಷದ ಉಪಚಾರಗಳಿಂದ ಗುಣಪಡಿಸಲಾಗದ ಕಾಯಿಲೆಗಳು ಬರುತ್ತಿದ್ದು ಎಚ್ಚರಿಕೆ ಜೀವನ ನಡೆಸಬೇಕಿದೆ, ನಾವು ಸೇವಿಸುವ ಆಹಾರ ಪದ್ಧತಿ ಶೈಲಿ ಬದಲಾಯಿಸಿಕೊಳ್ಳವುದರ ಜತೆ ಪ್ರತಿನಿತ್ಯ ವ್ಯಾಯಾಮ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಅವರು ಮಾತನಾಡಿ ಸಂಸ್ಥೆಯ ವತಿಯಿಂದ ಮಹಿಳಾ ಸಬಲೀಕರಣ ಜತೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮ ಅವರ ಮಾರ್ಗದರ್ಶನದಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭ ಸಂಸ್ಥೆಯ ಮೇಲ್ವಿಚಾರಕ ಜಗನ್ನಾಥ್, ಶಿಕ್ಷಕ ಮಹೇಶ್, ಸಿಎಚ್ಒ ರಚನಾ, ಒಕ್ಕೂಟ ಅಧ್ಯಕ್ಷೆ ಬಿ.ಎಸ್ ಜಯಲಕ್ಷ್ಮಿ, ಉಪಾಧ್ಯಕ್ಷೆ ಗೀತಾ, ಪ್ರತಿನಿಧಿಗಳಾದ ವೀಣಾ, ಬಿಂದು ಹಾಗೂ ಒಕ್ಕೂಟ ಪದಾಧಿಕಾರಿಗಳು ಸದಸ್ಯರು ಇದ್ದರು.

RELATED ARTICLES
- Advertisment -
Google search engine

Most Popular