ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆ ಮಂಡ್ಯ ಯೂತ್ ಗ್ರೂಪ್ ವತಿಯಿಂದ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತು. ಕರ್ನಾಟಕಕ್ಕೆ ಆದ ಅನ್ಯಾಯ ಬಿಂಬಿಸುವ ತಕ್ಕಡಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ವಿಚಾರದಲ್ಲಿ ಸದಾ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ತೀರ್ಪು ನ್ಯಾಯ ಸಮ್ಮತವಾಗಿರಲೆಂದು ನ್ಯಾಯ ದೇವತೆ ಕಣ್ಣಿಗೆ ಬಟ್ಟೆ ಕಟ್ಟಿರುತ್ತಾರೆ, ಆದರೆ ಕಾವೇರಿ ವಿಚಾರದಲ್ಲಿ ಪ್ರಾಧಿಕಾರ ಕಣ್ಣು, ಕಿವಿಗೆ ಬಟ್ಟೆ ಕಟ್ಟಿಕೊಂಡಿದೆ. ಮೊದಲು ನಮ್ಮ ರೈತರಿಗೆ ಹಾಗೂ ಕುಡಿಯಲು ನೀರು ಉಳಿಸಿಕೊಳ್ಳಿ ಆನಂತರ ತಮಿಳುನಾಡಿಗೆ ನೀರು ಹರಿಸಿ ಈ ಕೂಡಲೇ ತಮಿಳುನಾಡಿಗೆ ಬಿಡಲಾಗುತ್ತಿರುವ ನೀರು ನಿಲ್ಲಿಸುವಂತೆ ಮಂಡ್ಯ ಯೂತ್ ಗ್ರೂಪ್ ಅಧ್ಯಕ್ಷ ಡಾ. ಅನಿಲ್ ಆನಂದ್ ಅವರ ನೇತೃತ್ವದಲ್ಲಿ ಆಗ್ರಹಿಸಲಾಯಿತು.
