ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಶ್ರೀರಂಗಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವೆ.
ಪಟ್ಟಣದ ಅಂಬೇಡ್ಕರ್ ಪ್ರತಿಮೆ ವೃತ್ತದಿಂದ ತಾಲೂಕು ಕಚೇರಿವರೆಗೂ ಮರಗಾಲ ಮಂಜುನಾಥ್ ಹಾಗೂ ಗೋವಿಂದೇಗೌಡ ರಿಂದ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರವೇ, ದಸಂಸ, ರೈತಸಂಘ, ಪ್ರಜ್ಞಾವಂತರ ವೇದಿಕೆ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಯಿತು.