ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಸಿತು.
ಈ ವೇಳೆಲ್ಲಿ ಹೈಕೋರ್ಟ್ ನ್ಯಾಯಪೀಠಕ್ಕೆ ಅರ್ಜಿಯ ವಿಚಾರಣೆಗೆ ಮೇಲ್ಮನವಿ ಸಲ್ಲಿಸಿದ್ದೇವೆ. ಹೀಗಾಗಿ ವಿಚಾರಣೆಯನ್ನು ಡಿಸೆಂಬರ್.9ಕ್ಕೆ ಮುಂದೂಡುವಂತೆ ಮನವಿ ಮಾಡಲಾಗಿತ್ತು. ಈ ಮನವಿ ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ಡಿಸೆಂಬರ್.10ಕ್ಕೆ ಮುಡಾ ಕೇಸ್ ಸಿಬಿಐ ತನಿಖೆ ಕೋರಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಹಾಜರಾಗಿದ್ದರು. ಅಲ್ಲದೆ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಿಕ ದೇವರಾಜು ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಅವರನ್ನು ಕೂಡ ಲೋಕಾಯುಕ್ತ ಗ್ರಿಲ್ ನಡೆಸಿತ್ತು. ಅಲ್ಲದೆ ಇಡಿ ಅಧಿಕಾರಿಗಳು ಕೂಡ ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದರು.