Monday, April 21, 2025
Google search engine

Homeರಾಜ್ಯಸುದ್ದಿಜಾಲಹಾಲತಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮ

ಹಾಲತಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮ

ನಾಗಮಂಗಲ : ತಾಲೂಕಿನ ಹಾಲತಿ ಕ್ಷೇತ್ರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮಾರ್ಚ್ ೫ ರಿಂದ ೭ ರವರೆಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾ ನಂದನಾಥ ಸ್ವಾಮೀಜಿ ತಿಳಿಸಿದರು.

ಅವರು ತಾಲೂಕಿನ ಹಾಲತಿ ಗ್ರಾಮದ ಶಾಖಾ ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತಿಹಾಸ ಪ್ರಸಿದ್ಧ ಹಾಲ್ತಿ ಕ್ಷೇತ್ರದಲ್ಲಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮಿಗಳ ಅನುಗ್ರಹ, ಶ್ರೀ ಅಮರಾನಂದ ಪರಮಹಂಸ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಾಲತಿ ಶಾಖಾ ಮಠದಲ್ಲಿ ನಿರ್ಮಾಣಗೊಂಡಿರುವ ನೂತನ ದೇವಾಲಯ, ವಿಮಾನ ಗೋಪುರ ಹಾಗೂ ಕ್ಷೇತ್ರದ ಅಧಿದೇವತೆಗಳ ಪ್ರತಿಷ್ಠಾಪನೆ, ಮಹಾ ಕುಂಭಾಭಿಷೇಕ, ಸಮುದಾಯ ಭವನ ಉದ್ಘಾಟನೆ ಗೊಳ್ಳಲಿವೆ ಎಂದು ತಿಳಿಸಿದರು.

ಐತಿಹಾಸಿಕ ನೆಲ, ಭವ್ಯ ಪರಂಪರೆಯ ಗ್ರಾಮದಲ್ಲಿ ಭ್ರಮರಾಂಭ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಮಹಾಗಣಪತಿ ಸುಬ್ರಹ್ಮಣ್ಯ ಸ್ವಾಮಿ, ಬಾಲ ಭೈರವೇಶ್ವರ ಸ್ವಾಮಿ ಪ್ರತಿಷ್ಠಾನಗೊಳ್ಳಲಿವೆ ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ ಚಾಲನೆ ನೀಡುವರು. ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ವಿವಿಧ ಶಾಖ ಮಠದ ಶ್ರೀಗಳು ಸೇರಿ ಅನೇಕ ಗಣ್ಯರು ಈ ಪೂಜಾ ಸಮಾರಂಭಗಳಲ್ಲಿ ಪಾಲ್ಗೊಳ್ಳುವರು ಎಂದರು. ಮುಂದಿನ ದಿನಗಳಲ್ಲಿ ಹಾಲ್ತಿ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ ಅವರು, ಈ ಧಾರ್ಮಿಕ ಸಭೆಯಲ್ಲಿ ಅಕ್ಕಪಕ್ಕದ ಗ್ರಾಮಸ್ಥರು ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಹಾಗೂ ಹಾಲ್ತಿ ಕ್ಷೇತ್ರದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರಾದ ಎಚ್.ಡಿ. ಕೃಷ್ಣೇಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular