ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಲವು ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲಿನಿಂದ A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಂತಹ ದೀಪಕ್ ಇಂದು ಗುರುವಾರ ಬಿಡುಗಡೆಯಾಗಿದ್ದಾರೆ.ಕಳೆದ ಸೋಮವಾರ ದೀಪಕ್ ಗೆ ಜಾಮೀನು ಮಂಜೂರು ಆಗಿತ್ತು. ನಿನ್ನೆ ಬಿಡುಗಡೆ ಆದೇಶದ ಪ್ರತಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳ ಕೈ ಸೇರಿದೆ. ಹೀಗಾಗಿ ಇಂದು A13 ಆರೋಪಿ ದೀಪಕ್ ಬಿಡುಗಡೆ ಆಗಿದ್ದಾನೆ.
ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಕೋರಿ ಹೈಕೋರ್ಟಿಗೆ ಅವರ ಪರ ವಕೀಲ ಸುನಿಲ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯ ವಿಚಾರಣೆ ಅಕ್ಟೋಬರ್ ೨೨ರಂದು ನಡೆಯಲಿದೆ. ಅದೇ ರೀತಿಯಾಗಿ ಪವಿತ್ರ ಗೌಡ ಕೂಡ ನಿನ್ನೆ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.