Friday, April 4, 2025
Google search engine

Homeಅಪರಾಧರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಎ1 ಆರೋಪಿ

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಎ1 ಆರೋಪಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಎ೧ ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆರೋಪಿಗಳ ವಿವರವನ್ನು ಉಲ್ಲೇಖಿಸುವಾಗ ದರ್ಶನ್ ಅವರನ್ನು ಎ೧ ಎಂದು ಪೊಲೀಸರು ಉಲ್ಲೇಖಿಸಲಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಬಂಧನದ ಬಳಿಕ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಅವರನ್ನು ಎ೧ ಎಂದು, ದರ್ಶನ್ ಅವರನ್ನು ಎ೨ ಆರೋಪಿ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ ತನಿಖೆ ವೇಳೆ ಇಡೀ ಕೃತ್ಯದ ಸೂತ್ರಧಾರ ದರ್ಶನ್ ಎಂಬುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಎ೧ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ದರ್ಶನ್ ರೇಣುಕಾಸ್ವಾಮಿ ಪತ್ತೆ ಹಚ್ಚಲು ಸುಪಾರಿ ಕೊಟ್ಟಿದ್ದರು. ರೇಣುಕಸ್ವಾಮಿ ಪತ್ತೆ ಬಳಿಕ ಕಿಡ್ನ್ಯಾಪ್‌ಗೆ ಸೂಚನೆ ನೀಡಿದ್ದರು. ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ, ಹತ್ಯೆ ಹಾಗೂ ಶವ ವಿಲೇವಾರಿಗೆ ಹಣ ಕೊಟ್ಟಿದ್ದು, ಸಿಸಿಟಿವಿ ದೃಶ್ಯಗಳ ಡಿಲೀಟ್ ಮಾಡಿದ್ದು ಸೇರಿದಂತೆ ಇನ್ನೂ ಅನೇಕ ಆರೋಪಗಳು ದರ್ಶನ್‌ರನ್ನು ಎ೧ ಆರೋಪಿ ಎಂದು ಉಲ್ಲೇಖಿಸಲು ಕಾರಣವಾಗಿದೆ.

RELATED ARTICLES
- Advertisment -
Google search engine

Most Popular