Saturday, April 19, 2025
Google search engine

Homeಅಪರಾಧರೇಣುಕಸ್ವಾಮಿ ಕೊಲೆ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್ ಆಗಿ ವಕೀಲ ಪಿ.ಪ್ರಸನ್ನ ಕುಮಾರ್ ನೇಮಕ

ರೇಣುಕಸ್ವಾಮಿ ಕೊಲೆ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್ ಆಗಿ ವಕೀಲ ಪಿ.ಪ್ರಸನ್ನ ಕುಮಾರ್ ನೇಮಕ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಪ್ರಾಸಿಕ್ಯೂಟರ್ ಆಗಿ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ.

ನಟ ದರ್ಶನ್ ಮತ್ತಿತರರು ಆರೋಪಿಗಳಾಗಿ ರಾಜ್ಯದಾದ್ಯಂತ ಸಂಚಲನ ಉಂಟು ಮಾಡಿರುವ ಈ ಪ್ರಕರಣದಲ್ಲಿ ಪ್ರಸನ್ನ ಕುಮಾರ್ ವಿಚಾರಣಾ, ಸೆಷನ್ಸ್ ಮತ್ತು ಹೈಕೋರ್ಟ್ ನಲ್ಲಿ ವಿಶೇಷ ಪ್ರಾಸಿಕ್ಯೂಟರ್ ಆಗಿ ಪ್ರಕರಣವನ್ನು ಪ್ರತಿನಿಧಿಸಲಿದ್ದಾರೆ. ಅಂತೆಯೇ ಹೈಕೋರ್ಟ್ ವಕೀಲ ಸಿ.ಸಚಿನ್ ಅವರನ್ನು ಸಹಾಯಕ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular