Saturday, April 19, 2025
Google search engine

Homeರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಆಗಿರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆತ್ತಿಕೊಳ್ಳುವುದೇ ಅಪರಾಧ. ಅದು ಮರ್ಡರ್ ಆಗುವ ಮಟ್ಟಕ್ಕೆ ಹೋದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕೊಲೆಯಲ್ಲಿ ಹಲವಾರು ರೀತಿ ಇವೆ. ಇದು ಸಂಚು ಮಾಡಿ ಮರ್ಡರ್ ಮಾಡಿರುವ ಪ್ರಕರಣ. ಇದೊಂದು ಗಂಭೀರ ಪ್ರಕರಣ. ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.

RELATED ARTICLES
- Advertisment -
Google search engine

Most Popular