ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ೫೭ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ ಂ೧೩ ಆರೋಪಿ ದೀಪಕ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.೧೦ ರಂದು ವಿಚಾರಣೆ ಪೂರ್ಣಗೊಳಿಸಿ ಅ. ೧೪ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ ೧೧ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.