Saturday, April 19, 2025
Google search engine

Homeಅಪರಾಧಕಾನೂನುರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಜು.18ವರವರೆಗೆ ನ್ಯಾಯಾಂಗ ಬಂಧನ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಜು.18ವರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್‌ ಲೈನ್‌ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ.

ಆನ್‌ಲೈನ್‌ ಮೂಲಕ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ಜು.18ವರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.

ವಿಡಿಯೋ ಕಾನ್ಫೆರೆನ್ಸ್‌ ಮೂಲಕ ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಆರ್ಥಿಕ ಅಪರಾಧಗಳ ಕೋರ್ಟ್‌ ಗೆ ಹಾಜರಾಗಿದ್ದರು. ಈ ವೇಳೆ ಎಸ್‌ ಪಿಪಿ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಎಸ್‌ ಪಿಪಿ ರಿಮ್ಯಾಂಡ್‌ ಅರ್ಜಿಯನ್ನು ಸಲ್ಲಿಸಿದ್ದು, ಅದರಂತೆ ಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜು.18ರವರೆಗೆ ವಿಸ್ತರಿಸಿದೆ.

ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಶೆಡ್‌ ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮೊದಲಿಗೆ 18 ಮಂದಿಯನ್ನು ಬಂಧಿಸಲಾಗಿತ್ತು.

RELATED ARTICLES
- Advertisment -
Google search engine

Most Popular