Friday, April 4, 2025
Google search engine

Homeಅಪರಾಧಕಾನೂನುರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಳ್ಳಾರಿ ಜೈಲಿಗೆ, ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಳ್ಳಾರಿ ಜೈಲಿಗೆ, ಸಹಚರರು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಅವರ ಸಹಚರರು ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಿಗೆ ಸ್ಥಳಾಂತರ ಆಗಲಿದ್ದಾರೆ.

ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳನ್ನ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರು ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿರುವ ನ್ಯಾಯಾಲಯ ಆರೋಪಿಗಳ ಸ್ಥಳಾಂತರ ಮಾಡಲು ಅನುಮತಿ ನೀಡಿದೆ.

ಪ್ರಕರಣದಲ್ಲಿ ಒಟ್ಟು 17 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈ ಪೈಕಿ ರವಿ, ಕಾರ್ತಿಕ್, ನಿಖಿಲ್ ಹಾಗೂ ಕೇಶವಮೂರ್ತಿ ಅವರು ಈಗಾಗಲೇ ತುಮಕೂರು ಜೈಲಿನಲ್ಲಿದ್ದಾರೆ. ಪ್ರಕರಣದ ಎರಡನೇ ಆರೋಪಿ ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿಸಿದೆ.

ಪವನ್, ರಾಘವೇಂದ್ರ ಹಾಗೂ ನಂದೀಶ್ ಮೈಸೂರು ಕಾರಾಗೃಹ, ಜಗದೀಶ್- ಶಿವಮೊಗ್ಗ, ಧನರಾಜ್-ಧಾರವಾಡ, ವಿನಯ್ -ವಿಜಯಪುರ, ನಾಗರಾಜ್ -ಕಲಬುರಗಿ, ಲಕ್ಷ್ಮಣ – ಶಿವಮೊಗ್ಗ, ಪ್ರದೂಶ್​ನನ್ನು ಬೆಳಗಾವಿ ಜೈಲಿಗೆ ವರ್ಗಾಯಿಸಲಾಗಿದೆ. ಪವಿತ್ರಾ ಗೌಡ, ಅನುಕುಮಾರ್ ಹಾಗೂ ದೀಪಕ್​ರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಳಿಸಲಾಗಿದೆ.

RELATED ARTICLES
- Advertisment -
Google search engine

Most Popular