ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕುರಿತು ಚರ್ಚೆ ನಡೆಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಹಾಗೂ ದಿನಕರ್ ತೂಗದೀಪ ಅವರು ದರ್ಶನ್ ಪ್ರಕರಣದ ಕುರಿತು ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾಗ ದರ್ಶನ್ ಅಭಿಮಾನಿಗಳು ಡಿಬಾಸ್ ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ಪ್ರಕರಣದಲ್ಲಿ ಏನಾದರೂ ಅನ್ಯಾಯ ಆಗಿದ್ದರೆ ಸರಿಪಡಿಸಲು ಪ್ರಯತ್ನ ಮಾಡುತ್ತೇನೆ ಆದರೆ, ನಾವು ಕಾನೂನಿಗೆ ಗೌರವ ಕೊಡಬೇಕು. ನಾವೆಲ್ಲ ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಆಗಿದ್ದವರಿಗೆ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.