ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಸೆ.೧೭ ರವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ಶುಕ್ರವಾರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು. ಹೀಗಾಗಿ ಎಸ್‌ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು.
ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ ಸೆ.೧೭ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.