ಬೆಂಗಳೂರು : ನಟಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.ಮುಂದಿನ ೪೫ ದಿನಗಳ ಒಳಗಾಗಿ ಚಾರ್ಜ್‌ಶೀಟ್‌ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ೧೭ ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, ೨೦೦ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‌ಗೆ ರವಾನೆ, ವರದಿ ಬರಬೇಕು ಅಷ್ಟೆ.
ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಮಾಡಿ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ ಗೆ ಕರೆತಂದು ದರ್ಶನ್ ಸೇರಿದಂತೆ ಆತನ ಸಹಚರರು ಭೀಕರವಾಗಿ ಅಲೆ ನಡೆಸಿ ಕೊಲೆ ಮಾಡಿದ್ದರು.
ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ ನಂತರ ನಾಲ್ವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇರುವುದು ಬಯಲಾಗಿದೆ.