Saturday, April 19, 2025
Google search engine

Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ: ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ ೧೪೪ ಸೆಕ್ಷನ್ ಅಡಿ ನಿಷೇಧಾಜ್ಞೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತ ಮುತ್ತ ೧೪೪ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಧಂಧ ನಟ ದರ್ಶನ್ ಬಂಧನವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಸುತ್ತ ಮುತ್ತ ೧೪೪ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಉಲ್ಲೇಖಿತ ಪತ್ರದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ಮೊ.ಸಂ.೨೫೦/೨೦೨೪ ಕಲಂ.೩೦೨, ೨೦೧ ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದು, ಈ ವಿಚಾರವಾಗಿ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಸುತ್ತಮುತ್ತ ಸಾರ್ವಜನಿಕರು ಗುಂಪು ಸೇರುತ್ತಿದ್ದು, ಠಾಣೆಗೆ ಬರುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿರುವ ಕಾರಣ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ ೨೦೦ ಮೀಟರ್ ೨ : ೧೩-೦೬-೨೦೨೪ ೮? ೧೭-೦೬-೨೦೨೪ ೦ (೫ %) ೦.೧೪೪ ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಲಾಗಿರುತ್ತದೆ.

ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವಿಭಾಗದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದುಬಂದಿರುತ್ತದೆ. ಆದ್ದರಿಂದ ಅನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸುತ್ತಮುತ್ತ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ. ಆದ್ದರಿಂದ ಈ ಆದೇಶ ಹೊಡಿಸಲಾಗಿದೆ.

ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕ ನನಗೆ ದಂಡ ಪ್ರಕ್ರಿಯಾ ಸಂಹಿತೆಯ ಕಲಂ ೧೪೪ ನೇ ನೇ ಪ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಬಿ. ದಯಾನಂದ, ಐ.ಪಿ.ಎಸ್. : ೧೩-೦೬-೨೦೨೪ ೮- ೧೭-೦೬-೨೦೨೪ ರವರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ಸುತ್ತಮುತ್ತ ೨೦೦ ಮೀಟರ್ ಸುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಈ ಕೆಳಕಂಡೆ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ.

೧. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ ೫ ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.
೨. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
೩. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
೪. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
೫. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

RELATED ARTICLES
- Advertisment -
Google search engine

Most Popular