ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ 7 ಆರೋಪಿಗಳಿಗೆ ಉತ್ತರ ನೀಡುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಸಾಮಾನ್ಯ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿರುವ ಪೊಲೀಸರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಕೊಲೆ ಅಮಾನವೀಯವಾಗಿ ನಡೆದುಕೊಂಡಿರುವ ಕಾರಣ ಜಾಮೀನು ರದ್ದು ಮಾಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಜಾಮೀನು ಪಡೆದು ಹೊರಬಂದಿದ್ದ ನಟ ದರ್ಶನ್ ಗೆ ಇದೀಗ ಮತ್ತೆ ಸಂಕಷ್ಟ ಶುರುವಾಗಿದೆ.