Tuesday, April 22, 2025
Google search engine

HomeUncategorizedರಾಷ್ಟ್ರೀಯಗಣರಾಜ್ಯೋತ್ಸವ: ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಗುಪ್ತಚರ ಸಂಸ್ಥೆಗಳಿಗೆ ಸೂಚನೆ

ಗಣರಾಜ್ಯೋತ್ಸವ: ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಗುಪ್ತಚರ ಸಂಸ್ಥೆಗಳಿಗೆ ಸೂಚನೆ

ಶ್ರೀನಗರ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಡಿಜಿಪಿ ಆನಂದ್ ಜೈನ್‌ ತಿಳಿಸಿದ್ದಾರೆ.

ಗುಪ್ತಚರ ಸಂಸ್ಥೆಗಳು, ಭಾರತೀಯ ಸೇನೆ, ಬಿಎಸ್‌ ಎಫ್, ಸಿಆರ್‌ ಪಿಎಫ್ ಮತ್ತು ನಾಗರಿಕ ಆಡಳಿತದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಗಣರಾಜ್ಯೋತ್ಸವದ ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಜೈನ್, ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಮೇಲ್ವಿಚಾರಣಾ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.  

ದೇಶ ವಿರೋಧಿಗಳು ಎಸಗುವ ದುಷ್ಕೃತ್ಯಗಳನ್ನು ವಿಫಲಗೊಳಿಸಲು ಮತ್ತು ಗಣರಾಜ್ಯೋತ್ಸವದ ಆಚರಣೆಗಳನ್ನು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಸಂಸ್ಥೆಗಳು ಸಮನ್ವಯತೆ ಕಾಪಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.  

ಗಣರಾಜ್ಯೋತ್ಸವದ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗುವುದು. ಜತೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜೈನ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular