Friday, April 11, 2025
Google search engine

Homeರಾಜ್ಯನಾಳೆ ಗಣರಾಜ್ಯೋತ್ಸವ ದಿನಾಚರಣೆ : ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

ನಾಳೆ ಗಣರಾಜ್ಯೋತ್ಸವ ದಿನಾಚರಣೆ : ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

ಬೆಂಗಳೂರು :ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular