ಮಂಡ್ಯ: ಸಕ್ಕರೆ ಕಾರ್ಖಾನೆಗಳ ಆರಂಭದಲ್ಲಿ ವಿಳಂಬವನ್ನು ಖಂಡಿಸಿ ಸಕ್ಕರೆ ಕಾರ್ಖಾನೆ ಆರಂಭಿಸಿ ಕಬ್ಬು ಅರೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಡಿಸಿಗೆ ಮನವಿ ಮಾಡಿದ್ದಾರೆ.
ಮಂಡ್ಯದ ಡಿಸಿ ಕಚೇರಿಗೆ ತೆರಳಿ ಎಡಿಸಿ ಡಾ.ಹೆಚ್.ಎಲ್.ನಾಗರಾಜು ರವರಿಗೆ ರೈತ ಮುಖಂಡರು ಮನವಿ ಕೊಟ್ಟಿದ್ದಾರೆ.
ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ, ಕೊಪ್ಪದ ಎನ್.ಎಸ್.ಎಲ್. ಕಾರ್ಖಾನೆ ಆರಂಭಿಸುವಂತೆ ಆಗ್ರಹಿಸಲಾಗಿದೆ.
ಕ್ಷೇತ್ರದಲ್ಲಿ 15 ತಿಂಗಳ ಕಬ್ಬು ಉಳಿದಿದ್ದು ಕಟಾವಿಗೆ ಬಂದಿದೆ. ಕಾರ್ಖಾನೆ ಆರಂಭ ಮಾಡದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಗಾಲಕ್ಕೆ ತುತ್ತಾಗಿ ರೈತರು ಕಂಗೆಟ್ಟಿದ್ದಾರೆ. ತಕ್ಷಣವೇ ತುರ್ತಾಗಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ರೈತರ ಕಬ್ಬು ಅರೆಯುವಂತೆ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ರೈತ ಮುಖಂಡ ಅಣ್ಣೂರು ಮಹೇಂದ್ರ, ಚಂದ್ರಶೇಖರ್, ಪ್ರಕಾಶ್, ರಾಂಪುರ ಸೀತಾರಾಮು, ರಾಮಕೃಷ್ಣಯ್ಯ ಸೇರಿ ಹಲವರು ಭಾಗಿಯಾಗಿದ್ದರು.